1
ದಿಂಬಲ್ಲಿ ಮುಖ ತುರುಕಿ ಮಲಗುವರು ಹುಡುಗ ಹುಡುಗಿಯರು
ಕನಸು ಬೀಳುವ ಸಮಯ. ಭಿಕ್ಷುಕ
ಕೈಯ್ಯೊಡ್ಡ ಹೊರಟಿರುವ. ಜಮಾದಾರ
ಕಸ ಗುಡಿಸುತ್ತ ಬರುತ್ತಿದ್ದಾನೆ. ತರಗೆಲೆ ಉರಿಸಿ
ಚಾ ಮಾಡುತ್ತಿರುವವನ ಸುತ್ತ
ಕುಕ್ಕುರುಗಾಲಲ್ಲಿ ನಾಲ್ಕೈದು ಮಂದಿ--ಬೀಡಿ ಬಾಯಿ
ಮೈ ಮೇಲೆ ರಜಾಯಿ.
ಪೇಪರ್ ಬೇಕೇ ಪೇಪರ್ ಹುಡುಗ
ಬಸ್ಸಿನ ಸುತ್ತ ಬರುವಾಗ ಒಬ್ಬಾತ
ಟಿಫಿನ್ ಕ್ಯಾರಿಯರ್ ಹಿಡಿದು
ಓಡೋಡಿ ಬರುತ್ತಿರುವ. ಬೀದಿ ದೀಪಗಳು
ಅಕೋ ಒಟ್ಟಾಗಿ ನಂದಿದವು.
ಹೊಗೆ ಅಡರುತ್ತಿದೆ ಚಿಮಿಣಿಗಳಿಂದ. ಕಾರಖಾನೆಗಳ
ಸೈರನ್ ಕೂಗು. ಸೂಳೆಯರು ಲಂಗ ಕೊಡವಿ
ಹೊರ ಬರುತ್ತಾರೆ ರಾತ್ರಿ ಡ್ಯೂಟಿಯ ನರ್ಸು ಡಾಕ್ಟರರು
ಕಾರ್ಮಿಕರು ಅಲ್ಲಲ್ಲಿಂದ.
ಒಬ್ಬಾಕೆ ನಿದ್ರೆಯಿಲ್ಲದ ಮುಗುಳ್ನಗುವ ಚೆಲ್ಲಿದಳು.
ಕೋಳಿ ಕೂಗುತ್ತಿದೆ ಎಲ್ಲಿಂದಲೋ--ಎಲ್ಲರೂ
ಏಳುವುದಕ್ಕೆ ತವಕುತ್ತಾರೆ--
ವಿಟರೂ ಕೂಡ, ಅವರ ಪ್ರಜಾಪತಿ ಕೂಡ.
ರಂಗನೊಲವು ಇಲ್ಲದ ಬೋಳು ಯಮುನೆ ಮೇಲಿನ ಬೆಳಗು
ಕತ್ತಲೆಯ ತೊಡರುತ್ತಿದೆ.
ಮತ್ತೊಂದು ದಿನದ ಪಾಳಿಗೆ
ಹತ್ಯಾರು ಹಿಡಕೊಂಡು ಕುಂಟಿ ಹೊರಟಿದೆ ಡೆಲ್ಲಿ
ಹುಡುಕುತ್ತ ಕೋಲೆಲ್ಲಿ.
4
ಅಮ್ಮ ಸತ್ತಳು ನಾನು ಸಣ್ಣಾವ ಇದ್ದಾಗ
ಅಣ್ಣ ತಮ್ಮರು ಇಲ್ಲ ನಾನೊಬ್ಬನೇ.
ಎರಡನೇ ಮದುವೇಗೆ ದುಡ್ಡು ಬೇಕು ಹೇಳಿ
ಅಪ್ಪ ಮಾರಿದ ನನ್ನ ಸ್ವಾಮಿ ಶಿವನೇ.
ನನ್ನನ್ನು ತೆಕ್ಕೊಂಡ ತಾಯಮ್ಮ ಉಳ್ಳಾಲ್ತಿ
ಸಾಕುವಳು ಹತ್ಹೆಂಟು ಬೇಡೋರನ್ನು.
ಬೆಳಗಾತ ಎದ್ದವನೆ ಗೆಜ್ಜೆ ಕಟ್ಟಿಸಿಕೊಂಡು
ಕುಣಿಯುತ್ತ ಮನೆ ಮನೆಗ ತಿರುಪೆ ಹೊರಟೇ.
ಬೈಸಾರಿ ಹೊತ್ತೀಗೆ ಭಿಕ್ಸ ಒಟ್ಟಿಗೆ ಮಾಡಿ
ತಾಯಮ್ಮ ಕೈಯ್ಯಲ್ಲಿ ಇಟ್ಟು ನಮಿಸೀ--
ಅಲ್ಲದೇ ಇದ್ದಲ್ಲಿ ಹೊಡೆದಾಳು ಬಡಿದಾಳು
ಕೋಣೇಲಿ ಜಡಿದಾಳು ಕೊಂದೆ ಬಿಟ್ಟಾಳು.
ಬೀದಿ ಹೊಡೆ ನಿದ್ರಿಸಿ ಎದ್ದರೆ ಹೊತ್ತಾರೆ
ನೀಡುವಳು ಹೊಟ್ಟೆಗೆ, ಇತ್ತ ಬರುವೆ.
ಪೊಲೀಸು ಹಿಡಿದಲ್ಲಿ ಹಿಡಕೊಂಡು ಹೋದಲ್ಲಿ
ಬಿಡಿಸಿ ಕರೆತಂದಾಳು ಮರಳಿ ಪಡಿಗೆ.
ದೊಡ್ಡ ಆಗುವೆ ಮದುವೆ ಆಗುವೆ ಮುಂದಕ್ಕೆ;
ಹೆಣ್ತಿ ಜೊತೆ ಇದ್ದಲ್ಲಿ ಭಿಕ್ಸ ಜಾಸ್ತಿ.
ಮಕ್ಕಳು ಆದಲ್ಲಿ ಅವರನ್ನು ಸೇರಿಸಿ
ಕುಣಿದಲ್ಲಿ ಮಂದೀಗೆ ಪ್ರೀತಿ ಜಾಸ್ತಿ.
ನೀವು ದೊಡ್ಡವರಪ್ಪ ನಮ್ಮ ಕಾಯುವ ಜನರು
ಪರಮಾತ್ಮ ಮೇಲಿರುವ ಧರ್ಮ ಉಳಿಸಿ.
5
ನೀರು ಬಂದಿದೆ ಎಲ್ಲಿ ನೀರು ಬಂದಿದೆ ಅಲ್ಲಿ
ಆಚೆ ಕಡೆ ಬೀದೀಲಿ ದೇವರ ಗುಡಿಯ ಬಳಿ
ತನ್ನಿರಿ ಬಿಂದಿಗೆ ನೀರಿಗ್ಹೋಗುವ.
ಇಲ್ಲಿ ಬಂದಿತ್ತಾಗ ಈಗ ನಿಂತಿದೆ ಇಲ್ಲಿ
ಮುಂದಿನ ಬೀದೀಲಿ ನೀರು ಬಂದೀತೀಗ
ಬನ್ನಿರಿ ಮುಂದಕ್ಕೆ ನೀರಿಗ್ಹೋಗುವ.
ನೀವ್ಯಾರು ಆಚೆಯ ಬೀದಿ ಜನ ಇಲ್ಲ್ಯಾಕೆ
ತೊಲಗಿ ಈಗಲೆ ಬೇಗ ಎಳೆದು ಇಡಿರೋ ಕೊಡವ
ಪಸೆ ಇಲ್ಲ ನಮಗೇ ನೀರಿಲ್ಲವೋ.
ನಿನ್ನ ಮಾತನು ನಂಬಿ ನಾ ಬಂದೆ ಇಲ್ಲೀ ವರೆಗೆ,
ಕಾಲು ನೋವಿಗೆ ನೀನು ಎಣ್ಣೆ ತಿಕ್ಕುವಿಯೇನು,
ಹಡಬೆ ದರವೇಸಿ ಇಕ್ಕುವೆ ನಾಕು.
ಏನು ಜಗಳಾಡುವಿರಿ, ಏಕಿಷ್ಟು ಹಠ ನಿಮಗೆ,
ಇಲ್ಲಿಲ್ಲ ತೊಟ್ಟು ಸಹ--ತಿಳೀಲಿಲ್ಲ ಹೇಳಿದ್ದು?
ಹಿಡಕೊಂಡು ಒದಿರೋ ಬಿಡಿರಿ ಇನ್ನೆರಡು.
ಚೆಲ್ಲಿದೆ ನೆತ್ತರು ಎಲ್ಲಿದೆ ಗ್ರಂಧಿಗೆ,
ಎರಡಾದ್ರು ಹನಿ ನೀರು ಹೊಯ್ಯಿರಿ ಬಾಯಿಗೆ
ಒಡೆಯುವ ಮೊದಲೇ ಪ್ರಾಣದ ಗಡಿಗೆ.
ತನ್ನಿರಿ ಬಿಂದಿಗೆ ನೀರಿಗ್ಹೋಗುವ.
8
ಐ ಲವ್ ಯೂ ಎಂದ. ನಿನ್ನ ಕಣ್ಣು ಅದಷ್ಟು ಚೆಂದ ಎಂದ.
ನನಗ ಇದು ವರೆಗೆ ಹಾಗೆ ಯಾರೂ ಅಂದಿರಲಿಲ್ಲ. ಎದೆಯಲ್ಲಿ
ಸಿಹಿ ಸಿಹಿ ಆಯ್ತು. ಕಾಲೇಜು ಬಿಟ್ಟು ಬಾ ಸೀದ
ಬಸ್ಟೇಂಡಿಗೆ ಅಂದ. ರಾತ್ರಿಯ ಜರ್ನಿ. ಸಿಕ್ಕು ಸಿಕ್ಕಲ್ಲಿ
ಕೈ ಬಿಟ್ಟ. ಡೆಲ್ಲಿಯಲ್ಲಿ ಆಂಟಿ ಮನೆಯಲ್ಲಿ
ಮದುವೆ ಎಂದ. ಬಸ್ಸಿಳಿದು ಹೋಟೆಲ್ಲಿಗೆ ಯಾಕೆ
ಎಂದು ಕೇಳಿದ್ದಕ್ಕ ಆಂಟಿ ಮನೆ ಎಲ್ಲಿ
ಹುಡುಕಬೇಕು ಎಂದ. ಹೋಟೆಲ್ಲು ರೂಮಲ್ಲಿ ಅವನ
ಡ್ರೇಸೇ ಬದಲಾಯ್ತು. ಯಾರೋ ವಿಸಿಟರಿಗೆ ನನ್ನ
--ಇವನ ಎದುರೇ ಅವ ನನ್ನ ಮುಟ್ಟಿ ಪರೀಕ್ಷಿಸಿ ನೋಡಿ,
ಬಾರ್ಗೇನು ಮಾಡಿ--ಎಷ್ಟೋ ಮೊತ್ತಕ್ಕೆ ಮಾರಿದನು. ಆ ಮೇಲೆ
ನನ್ನ ಎಷ್ಟೋ ಜನರು ಎಷ್ಟೋ ಕಾಲ ಹತ್ತಿದರು.
ಮುಟ್ಟು ನಿಂತಾಗ ಬಸಿರು ತೆಗೆಯಿಸಿದ. ಬಳಿಕ
ಮತ್ತೊಬ್ಬನಿಗೆ ಕೊಟ್ಟ. ಕೂಡುವುದಿಲ್ಲ ಎಂದಲ್ಲಿ ಬಿಗಿದರು
ಉಪವಾಸ ಕೋದಂಡ. ಕೇಳಿದರೆ ಹೇಳಿದ ಹಾಗೆ
ಬ್ರಾಂದಿ ಹೋಟೆಲ್ಲು ತಿಂಡಿ ಸಿನೆಮಾ ದೇವಸ್ಥಾನ.
ಪುಣ್ಯ ಹೆಚ್ಚಿದರೆ ಮುಂದಿನ ಜನ್ಮ ಗರತಿ ಆಗುವೆನೆಂತೆ.
ಹಬ್ಬಲಿ ಏಡ್ಸ್. ಕುಟ್ಟೆ ಸುರಿಯಲಿ; ರಿವೆಂಜು ರುಚಿ;
ಮನೆಗೆ ಮರಳುವುದು ಆಗದ ಮಾತು. ತಿಳಿಯಲಿ: ಸತ್ತೆ;
ಅಥವಾ ಪ್ರಿಯನೊಡನೆ ಸಹಭಾಗಿ ಸುಖಿ ಸೀಮಂತೆ.
9
ಹಡಬೆ ನನ್ಮಗನ್ನ ತಂದು. ಏನಂತಿಳ್ಕೊಂಡಾನ್ಲೇ ಅವ ನನ್ನ?
ನಾ ಮರ್ಡರ್ ಮಾಡೀನಿ ಅಂತ ಹೇಳ್ಸಿ ಗಲ್ಲಿಗೆ ಹಾಕ್ಸಾನಂತೇನು?
ಅವನ ಅಮ್ಮನ್ನ ಹಡ. ಹೇಳ್ಲಾ ಅವಂಗೆ--
ಇಡೀ ಲೀಗಲ್ ಸಿಸ್ಟಂ ನನ್ನ ಫಿಂಗರ್ ಟಿಪ್ಸ್ನಾಗೆ ಐತೆ.
ನಾ ಮನ್ಸು ಮಾಡಿದ್ದರೆ
ಈ ಹ್ಯೂಮನ್ ರೈಟ್ಸ್ ಎಜಿಟೇಟರ್ಸ್ ಮ್ಯಾಗೇ ಕೇಸು ಹಾಕ್ಸಿ ಗಲ್ಲಿಗೆ ಹಾಕ್ಸೇನು--
ಮಾಡಿಲ್ಲೇನು ನೈಜೀರಿಯಾದಾಗೆ ಕೆನ್ ಸರ್ ವಿವಾ ಎಂಬ ನನ್ಮಗಂಗ.
ನನ್ನೇ ಗಲ್ಲಿಗೆ ಹಾಕ್ಸಾನಂತೆ--ನನ್ನ--
ಬಾಂಛೋಥ್ ಸೂಳೇಮಗನ್ನ ತಂದು.
ಈ ಇಲೆಕ್ಷನ್ದಾಗೆ ನಾ ಗೆಲ್ದಿದ್ದರೆ ಹಾಕ್ಸೂ ಹಾಕ್ಸಾನು ಅನ್ನು.
ಅದೇ ಭಯ ದಿನಾ ರಾತ್ರಿ ಕಾಡ್ತೈತೋ ಮಗನೇ.
ಗೆಲ್ಬೇಕು--ಏನೇ ಆಗ್ಲಿ ಗೆಲ್ಬೇಕು.
ರಿಗ್ ಮಾಡಾಕೆ ಎರೇಂಜ್ ಮಾಡು.
ಎಂಟು ಗಂಟೆಗೆ ಮೊದ್ಲು ಎಲ್ಲಾ ಓಟು ಹಾಕಿ ಮುಗಿದ್ಬಿಡ್ಲಿ.
ಒಂದು ವೇಳೆ ಏನು ಮಾಡಿದರೂ ಗೆಲ್ಲಾಕಾಯಾಕಿಲ್ಲ ಅಂದರೆ
ಎದುರಾಳೀನ ಒಂಜಿನಕ್ಕೆ ಮೊದಲೇ ಕಚಕ್ ಮಾಡಿಸ್ಬಿಡು.
ಸಪಾರಿ ಕೊಡು. ನೀನೇ ಮಾಡೋಕ್ಹೋಗಿ ಸಿಕ್ಬಿದ್ದೀಯ--ದುಡ್ಡು
ಯಾರಾದ್ರೂ ಬಿಸಿನೆಸ್ಮನ್ನು, ಇಂಡಸ್ಟ್ರಿಯಲಿಸ್ಟು, ಹೋಟೆಲ್ ಓನರ್ ಹತ್ರ ಇಸ್ಕೋ.
ಕೊಡಲ್ಲ ಅನ್ನೋ ಧೈರ್ಯ ಯಾವ ಸೂಳೇಮಗಂಗ್ ಐತಲೇ--
ಗೆದ್ದು ಒಂದು ಪೊಸಿಶನ್ ಈ ಸಲ ಪಡೀಲಿಲ್ಲಾಂದ್ರೆ
ನಾ ಹೋದೆ. ಆ ಮ್ಯಾಗೆ ಈ ಜನ್ಮದಾಗೆ ರೌಡಿಪಟ್ಟ ಮುಗಿಯೋ ಹಂಗಿಲ್ಲ.
ಬೇವಾರ್ಸಿ ನನ್ ಮಗನೇ, ದೇವಸ್ಥಾನಕ್ಕೆ ಡೊನೇಷನ್ ಕೊಟ್ಟವ್ರೆ,
ಮಸೀದಿಲಿ ನಮಾಜು ಮಾಡವ್ರೆ,
ಜಾತ್ಯತೀತ ಸೆಕ್ಯೂಲರ್ ಡೆಮಕ್ರಾಟಿಕ್ ಲೀಡರ್
ಅಂತ ಪೇಪರ್ನಾಗೆ ಹಾಕ್ಸು. ಇಡೀ ಕ್ಷೇತ್ರದಾಗೆ
ಕ್ರಿಶ್ಚಿಯನ್ ಓಟರ್ಸ್ ಒಟ್ಟು ಇರೋರೇ ಮುನ್ನೂರು ಜನ--
ಹಂಗಾಗಿ ಇಗರ್ಜಿ ಪಂಚಾತಿಕೆ ಬುಟ್ಬುಡು.
ಯಾರಾದ್ರೂ ನನ್ನ ಟೀಕಿಸಿದ್ರೆ
ಕೆಳವರ್ಗದವರನ್ನ, ಶೋಷಿತರನ್ನ ರಿಪ್ರಸೆಂಟ್ ಮಾಡೋರಿಗೆ
ಇಂದು ನಮ್ಮ ದೇಶದಾಗೆ ಉಳಿಗಾಲ ಇಲ್ಲ
ಅಂತ ವಾಚಕರ ವಾಣೀಲಿ ಕಾಗದ ಬರೋಕೆ ವ್ಯವಸ್ಥೆ ಮಾಡ್ಸು.
ಬುದ್ಧಿಜೀವಿಗಳು ಭಾಷಣದಲ್ಲಿ ಹಂಗಂತ ಹೇಳ್ಲಿ.
ಗಟ್ಟಿ ಕುಳವಾರು, ನಮಗೆ ಬೇಕಾದ ಹಾಗೆ ಪ್ರಚಾರ ಕೊಡ್ತಾನೆ ಅಂತಾದ್ರೆ
ತುಸು ಜಾಸ್ತೀನೇ ಬಿಸಾಕು.
ಹೂಂ. ದಯಮಾಡ್ಸು. ಬಾಗ್ಲು ಹಾಕ್ಕೊಂಡು ಹೋಗು. ಯಾರಾದ್ರೂ ಬಂದ್ರೆ
ಕಾನ್ಫರೆನ್ಸ್ನಾಗವ್ರೆ, ಸ್ಟಡಿ ಮಾಡ್ತವ್ರೆ ಅಂತ ಬೊಗಳಾಕೆ
ಆ ನನ ಮಗ ದರವಾನಂಗೆ ಹೇಳು.
ಹಡಬೆ ಬಡ್ಡೆತ್ತಾವು. ಎಲ್ಲಾ ಬುಡ್ಸಿ ಬುಡ್ಸಿ ಹೇಳ್ಬೇಕು.
ಬಾಟ್ಲಿ ತತ್ತಾ. ನಂಜಿಕೊಳ್ಳೋಕೆ ಯಾವಳಾದ್ರೂ ಅದಾಳೇನ್ಲಾ?
ಕಳ್ಸು ಮತ್ತೆ.
19
(ಡೆಲ್ಲಿಯಲ್ಲಿ ಕಂಡದ್ದು)
ಇಪ್ಪತ್ತೆಂಟು ತಲೆ, ಹದಿನಾಲ್ಕು ದಾಡೆ
ಮೂವತ್ತಾರು ಕೈ, ಸಾವಿರದೆಂಟು ನಾಲಗೆ
ಕಣ್ಣಿನ ಬದಲು ಎರಡು ಬೆಂಕಿಯ ಗೋಳ
ಗಾಳಿಯನ್ನು ಹಿಡಿದು ಗುಹೆಯಲ್ಲಿ ಒಗೆದ;
ಬೆಳಕನ್ನು ಹಿಡಿದು ಕತ್ತಲೆಯಲ್ಲಿ ಮುಳುಗಿಸಿದ;
ಮಾತನ್ನು ತಿರುಚಿ ಕೊರಳಲ್ಲಿ ಹೂತ.
ಗಾಳಿಯ ಪ್ರಾಣವನ್ನು
ಬೆಳಕಿನ ದೀಪ್ತಿಯನ್ನು
ಮಾತಿನ ಧ್ವನಿಯನ್ನು
ಕೊಂದ;
ತನ್ನ ಹೃದಯದ ಬೆಂಕಿಯನ್ನೆತ್ತಿ ಅಪ್ಪಿ ಮುದ್ದಾಡಿ
ತೊಟ್ಟಿಲಲ್ಲಿಟ್ಟು ಮಲಗಿಸಿ ತೂಗಿ
ಹಸಿವಾದಾಗ ಅದನ್ನೇ ತಿನ್ನುತ್ತಿದ್ದ.
22
ಈ ಲವ್ ಅನ್ನೋದು ಯೂಸಿಲ್ಲ. ಮಾಡು. ಬೇಡ ಹೇಳೂದಿಲ್ಲ.
ಆದರೆ ಕೀಪು ಅಂತ ಇರ್ಲಿ. ಮದುವೆ ಬೇಡ.
ಮದುವೆಗೆ ನೋಡು--ಮೂರು ಜಾತಕ ಫೊಟೋ ಬಂದವೆ.
ಇವ್ಳು ಮಿನಿಸ್ಟ್ರ ಮಗಳು; ಇವಳು ಅಮೆರಿಕಾದಲ್ಲಿ ಗ್ರೀನ್ ಕಾರ್ಡ್ ಹೋಲ್ಡರ್;
ಮತ್ತೆ ಇವಳ ಅಪ್ಪ ನೋಡು ಸೆಕ್ರೆಟೇರಿಯಟ್ನಲ್ಲಿ ಆಫಿಸರ್ರು.
ಕಾಂಟ್ರಾಕ್ಟ್, ಟೆಂಡರ್ ಎಪ್ರೋವಲ್ ಇವರ ಜವಾಬ್ದಾರಿ.
ಮೂವರಲ್ಲಿ ಯಾರನ್ನು ಮಾಡ್ಕಂಡ್ರೂ ಫ್ಯೂಚರ್ ಈಸ್ ಸೆಕ್ಯೂರ್ಡ್.
ಅಲ್ಲಯ್ಯಾ--ಈ ಫಿಲಾಸಫಿ ಲಿಟರೇಚರ್ ಪಟರೇಚರ್ ಓದ್ತಾ ಇರ್ತೀಯಲ್ಲ--ಏನಕ್ಕೆ?
ಹಂಗೂ ಇಂಟಲೆಕ್ಚುವಲ್ ಪ್ರೊಫೆಶನ್ನೇ ಬೇಕಂತಿದ್ರೆ
ಹೊರಸ್ಕೋಪು ನೋಡೋದು ಕಲಿತ್ಕೋ.
ಕ್ರಿಸ್ಟಲ್ ಗೇಸಿಂಗ್, ಪಾಂಚೆಟ್, ಕವಡೆ, ಪಂಚಾಂಗ--
ಭವಿಷ್ಯ ಹೇಳೋರು ಅಂದರೆ
ಎಂಥಾ ಮಂತ್ರಿ ಪೊಲಿಟಿಶಿಯನ್ ಮಿಸೆಸ್ ಹತ್ರಾನೂ ಸಲೀಸಾಗಿ ಹೋಗ್ಬಹುದು.
ಒಂಚೂರು ಪ್ರಾಣಾಯಾಮ ಯೋಗ ಕಲಿತ್ಕೊಂಡ್ರೆ
ಅಮೆರಕಾಕ್ಕೆ ವಲಸೆ ಹೋಗಿಯೂ ಪ್ರಾಕ್ಟೀಸು ಮಾಡ್ಬಹುದು.
ಯಾವಾಗಲೂ ಒಂದು ಕಾಲು ಆಚೆ ಇಟ್ಟಿರೋದು ಒಳ್ಳೇದು.
ಪುರಾನಾ ಖಿಲಾ ಮತ್ತು ಜೂ ಇರುವಲ್ಲಿ ಹಿಂದೆ ಇತ್ತಂತೆ ಇಂದ್ರಪ್ರಸ್ಥ--
ಅದರಿಂದ ಮುಂದೆ ಏಳು ಜನ್ಮಗಳಲ್ಲಿ
ಬೆಳೆದು ನಿಂತಿದೆ ಡೆಲ್ಲಿ.
ಅದೂ ಬದಲಿದೆ ಈಗ:
ಅರಮನೆ ಮ್ಯೂಸಿಯಂ ಆಗಿ, ಹವಾಮಹಲು ಹೋಟೆಲ್ ಆಗಿ,
ಭಿಲ್ಲ ರಂಗ ಬುದ್ಧ ಜಯಂತಿ ಪಾರ್ಕಲ್ಲಿ ಅವತರಿಸಿ.
ಒಂದು ನವಿಲು, ಗರಿಗಳ ಫುಟ್ಪಾಥಲ್ಲಿ ಉದುರಿಸಿಕೊಂಡು,
ರಸ್ತೆ ಮಧ್ಯೆ, ರಾಷ್ಟ್ರಪಕ್ಷಿ,
ನೀರಡಿಸಿ ನಿಂತಿತ್ತು. ರೆಕ್ಕೆ ತುಂಡು ಮಾಡಿ, ಕಾಲು ಕಟ್ಟಿ,
ರಾಶಿ ರಾಶಿ ಕೋಳಿ ಲಾರೀಲಿ ತುಂಬಿ ತೆಕ್ಕೊಂಡು ಹೋಗ್ತಿದ್ದರು.
ಬೆಳಿಗ್ಗೆ ಕೊಕ್ಕೊಕ್ಕೋ ಅಂತಿದ್ದ ಕೋಳಿ
ಬಿಸಿಲಲ್ಲಿ ಬಾಯಿ ಅಗಲಿಸಿ ಮುಚ್ಚಿ ಅಗಲಿಸಿ ಮುಚ್ಚಿ ಮಾಡ್ತಿದ್ದವು.
ಕಾಲ, ಸ್ಥಳ ಎಲ್ಲಾ ಯದ್ವಾತದ್ವ ಆಗದೆ.
ಯಾವಾಗ ಎಲ್ಲಿ ಏನಾಗುತ್ತೆ ಗೊತ್ತಿಲ್ಲ.
ಸರಿಯಾದ ಕಡೆ ನೋಡಿ, ಹತ್ತಬೇಕಾದ ಕಡೆ ಹತ್ತಿ,
ಆಯಕಟ್ಟಿನ ಜಾಗ ಹಿಡಕೊಂಡು ಕೂತುಕೋ.
ಆ ಮೇಲೆ ಬೇಟ ಸಲೀಸು.
ಇಲ್ಲಾಂದ್ರೆ ತಾಪತ್ರಯ ತಪ್ಪಿದ್ದಲ್ಲ.
26
ಬೆಳಕು ಮೂಡೆ ಮುಳುಂಕುಗಳ ತುಂಬುವುದು,
ವಿರಸ ವಿಚ್ಛಿದ್ರ ಕೊನೆಯಾಗಿ ಸತ್ತ್ವಶೀಲರ ಪ್ರಾಣ
ಗುಡಿ ಕಟ್ಟುವುದು ಎಂದು ಮಂಗಳ ಮಾತು ಆಡುವುದು
ಮಂಗನಿಗೆ ಬಿಸ್ಕೀಟು ತಿನ್ನಿಸುವ, ಕಾಗೆ ಕಾಕಾದಲ್ಲಿ
ವಿಶ್ವದ ಕುಣಿತ ಕಾಣುವ, ಭವಲೋಕ
ದೇವಲೋಕವೆ ಎಂಬ ಶುಭ ಜಾಯಮಾನಕ್ಕೆ ಸರಿ.
ಇರುಳು ಪಸರಿಸಿದೆ; ಹೊರಬೀಳಲಳವಲ್ಲ; ಕೊಲೆಗಡುಕ
ಕಳ್ಳ ತಲೆಹಿಡುಕ ರೌಡಿ ರಾಜಾರೋಷ ತಿರುಗುವರು.
ಪೊಲೀಸು ಅಧಿಕಾರಿ ಮಂತ್ರಿ ನ್ಯಾಯಾಧೀಶ
ಭೂಗತರ ಸೆರೆ; ಮತ್ತು; ಏಡ್ಸ್ ಇನಿಬರಿಗೆ; ಅರಿವುಳ್ಳ
ಕೆಲವರಿಗೆ ಪೊರೆ ಪುಕ್ಕು; ಗುಡಿಯ
ಗೋಡೆ ಜರಿದಿದೆ; ಹೊನ್ನ ಕಳಶ ಕುಸಿದಿದೆ; ಕಾಲೆಂಬ
ಕಂಬ ಜರಿದಿದೆ; ಹುಚ್ಚು ಶಿರ; ಹುಳಿತ ಯೋಚನೆ; ಭೀತಿ;
ನುಡಿ ಸ್ಫಟಿಕ ಶಲಾಕೆ ಆಗದೆ ಒಳಗೆ ಕುರುಡುತ್ತಿದೆ.
28
(ಡೆಲ್ಲಿವಾಲಾ--4)
ವರ್ಷ ಎಂಭತ್ತಲ್ಲ ನೂರ ಎಂಭತ್ತು ಕಳೆದರೂ
ಕಂಡದ್ದು ಮಾತ್ರ
ನಾಲ್ಕು, ಬರೀ ನಾಲ್ಕು ನಕ್ಷತ್ರ.
ಒತ್ತಿ ಒತ್ತಿ ಬರುವ ಒಳಗಿನ ಇರುಳು
ಇರುಳ ಎಳೆ ಎಳೆ ತಮಸ್ಸ ಅಂಧಕಾರದ ಘೋರ
ಉಸಿರು ಕಟ್ಟಿಸಿದಲ್ಲಿ
ಬಯಲು ಅಥವಾ ಗುಡ್ಡೆ ತುದಿ ಹತ್ತಿ
ನಿಲ್ಲೋಣ ಅನಿಸುತ್ತಿತ್ತು; ನಿಂತಲ್ಲಿ ತಿಳಿಯುತ್ತಿತ್ತು
ಲಕ್ಷ ಲಕ್ಷ ನಕ್ಷತ್ರ
ಗಿಡ ಮರ ಬಂಡೆ
ಸುಗಂಧ ದುರ್ಗಂಧ ವಾಸನೆ, ಮತ್ತು
ಜುಳು ಜುಳು ಹರಿವ ಅಂತರಗಂಗೆ.
ಬಾಗಿಲು ಮುಚ್ಚಿ ಒಳಗಿಂದ
ಕೀಹೋಲು ಸಂದಿಯಲ್ಲಿಣುಕಿ
ವರ್ಷ ಎಂಭತ್ತಲ್ಲ ನೂರ ಎಂಭತ್ತು ಕಳೆದರೂ
ನಾಲ್ಕಾದರೂ ಕಂಡದ್ದು ಬೆಳಕಿನ ಭಾಗ್ಯ.
30
ಜೀವನದ ಸಾರ್ಥಕ್ಯ ಏನೆಂದು ಕಾಡುವುದು
ಸಾವು ಇಂಥವರನ್ನು ಒದ್ದೊಯ್ಯಲು;
ಜೀವ ಜೀವದ ಮಧ್ಯೆ ಐಸು ಬೆಳೆಸಿರಲಿಲ್ಲ,
ಭವದ ಅನುಭವದಲ್ಲಿ ಬೆಳೆದಿದ್ದರು.
ಮಾತು ಮಾತಿಗೆ ಸ್ವರ್ಗ ಪಾಪ ಪುಣ್ಯದ ಹೆಸರು
ಕೂತುಕೊಂಡಿರುವಂತೆ ಮರಸಿಗಾಗಿ
ಸತ್ತ ಮನಸ್ಸಿನ ಮಂದಿ ಹೇಳಿ ಕಾಡುವ ಹಾಗೆ
ಆತು ಸಂಸ್ಕೃತ ಶ್ಲೋಕ ಊರೆಗಾಗಿ
ಕೊಂದವರಲ್ಲ ಹೇಳುತ್ತ ಮನಸ್ಸುಗಳ ಸೃಜನತ್ವ;
ಚೆಂದದ್ದು ಬಾಳುವೆಯು, ಪರಿಮಳದ
ಗಂಧ ತೀಡಿದ ಹಾಗೆ ಇವರ ಬದುಕೆಂದೇನು
ಹಿಂದಿಂದು ಹೋಲಿಕೆಯ ಮರಳಿ ಬಳಸಿ.
ಇಂಥವರು ಹೋದಾಗ ಎಂಥದ್ದು ಉಳಿದೀತು?--
ಸಂತೆ ಸರಕಿನ ರೀತಿಯಂಥ ಬದುಕು,
ಮಂಥರೆಯಂಥವರು, ಹೊಟ್ಟೆ ಹುಳಗಳ ಹಾಗೆ
ತಿಂತಿಣಿಸಿ ಒಳಶಕ್ತಿ ಹೀರುವವರು;
ತಪ್ಪು ಹುಡುಕುವ ಬಾಸು, ಕಪ್ಪ ಸುಲಿಯುವ ಅರಸ,
ಕೆಪ್ಪ ಕೂತಿದ್ದಾನೆ ಮೇಲಿನೊಡೆಯ;
ಅಪ್ಪಿ ಒಂದಾಗದೆಯೆ ಸಹಧರ್ಮಿ ಬೀಗಿದೆ ವಿರಸ,
ಉಪ್ಪುಗಂಜಿಯ ಊಟ, ಸೂಳೆ ಸರಸ.
ಲಂಚ ಹೊಡೆಯುವ ಜಡ್ಜು, ಫೈಲು ನುಂಗುವ ಕ್ಲರ್ಕು,
ಅಂಚೆ ಕೆಟ್ಟಿದೆ, ಸ್ವಗತ, ಪೆಟ್ಟಿ ವಾಸ;
ಇಂಚು ಇಂಚೇ ಹಿಂಡಿ ಜೀವ ತಿನ್ನುವ ಏಡ್ಸು,
ಸಂಚು ಪಡೆ ಆಡಳಿತ, ದೇಶ ದಾಸ.
ಎಂಥದ್ದು ಉಳಿದೀತು ಇಂಥವರ ಕೊಂದಾಗ?--
ಜಂತು ಆಸೆಯ ದೊಡ್ಡ ದೊಡ್ಡ ಪಡೆಯು
ಎಂಥೆಂಥದೋ ರೂಪ ತೊಟ್ಟು ಕುಣಿದಾಡುವುದು--
ಶಾಂತಿ ಸಹನೆಯ ವೇಷ ಮಾತು ಕೂಡ.
ಕೊಂದಾಗ ಇಂಥವರ ಎಂಥದ್ದು ಉಳಿದೀತು?--
ಎಂದಿಗೂ ಎದೆಗುಂದಿ ಕೂರಲಿಲ್ಲ;
ಕುಂದು ಕಾಣದ ನಡತೆ, ಕುಂದು ಕಾಣದ ಮಾತು,
ಬಂಧ ಹಾಳಾಗದ್ದ ಮೌಲ್ಯ ನಿಷ್ಠೆ:
ಉಳಿದೀತು ಎಂಥದ್ದು ಇಂಥವರ ಕೊಂದಾಗ?--
ಕೊಳಕು ಮಂಡಲ ಪಾಳ್ಯ ನೆಗೆದು ಮೆರೆದು
ಒಳ್ಳೆಯದು ನಾಗರಿಕ ಪಾತಾಳ ಸೇರುವುದು
ಕಳೆದು ಕವನಕ್ಕಿರುವ ಮುಖ್ಯ ಕಾರ್ಯ.
ಜೀವನದ ಸಾರ್ಥಕ್ಯ ಏನೆಂದು ಕಾಡುವುದು
ನಾವು ಇಂಥವರನ್ನು ಕಳೆದುಕೊಳಲು;
ಜೀವಗಳ ಆಳುವುದು ರೌಡಿ ಯಮ ವೈಷಮ್ಯ;
ದೇವ ಹೇಳಿದ್ದು ಇದು--ನಷ್ಟ ಅರಿವು.
31
(ಗೃಹಿಣಿಯ ಹಾಡು)
ಮಲಗು ನಿದ್ರಿಸು ಕಂದ ಪುಟ್ಟಾಣಿ ಜೋ ಜೋ
ಚೆಂದ ಕನಸಿನ ಮುದ್ದು ಮುದ್ದು ಮುದ್ದಾಣಿ ಜೋ ಜೋ
ಇದ್ದ ಬೆಳಕೂ ಹೋಗಿ ಬಿರುಗಾಳಿ ಬೀಸಿ
ಮಿಂಚು ಮಿಂಚಿತು ಗುಡುಗು ಸಿಡಿಲು ಆರ್ಭಟಿಸಿ;
ಬಂದೀತೆ ಮಳೆ? ನೀರು ಒಳ?
ಕಳೆಯಬೇಕಿದೆ ಇರುಳು ಆತಂಕ ಹಾಸಿ.
ಮಲಗು ನಿದ್ರಿಸು ಕಂದ ನಿನಗೇನು ಹಾಳು
ಆಗದೆಯೆ ಬೆಳಗಾತ ನಗುನಗುತ ಏಳು.
ದರೋಡೆಕೋರರು ಬಂದು ಇದ್ದುದ ಕದ್ದು
ಮುಗಿಸಿಬಿಡುವರು ಅಡ್ಡ ಬಂದವರ ಹೊಡೆದು;
ಮಕ್ಕಳನ್ನೂ ಅವರು ಎತ್ತಿ ಕೊಂಡೊಯ್ಯುವರು
ಕೈಯ್ಯೋ ಕಾಲೋ ತಿರುಚಿ ಬೇಡ ಕಳಿಸುವರು.
ಮಲಗು ನಿದ್ರಿಸು ಕಂದ ಯಾವುದೇ ಗೋಳು
ನಿನ್ನ ಮುಟ್ಟದೆ ದಿನವು ನಗುನಗುತ ಏಳು.
ಆಚೆ ಬದಿಯಲ್ಲೆಲ್ಲೊ ಭಿಕ್ಷುಕ ಹುಡುಗ
ಬಲ ಮೀರಿ ಕಿರುಚುವನು: ತಾಯಿ ಕೊಡಿ ಅನ್ನ;
ಈಚೆ ಬದಿಯಲ್ಲೆರಡು ನಾಯಿ ಮರಿ, ತಾಯಿ
ಕುಂಯ್ಗುಟ್ಟಿ ಪಾಂಕ್ಹಿಡಿದು ಪಡುತ್ತಲಿವೆ ಬನ್ನ.
ಇವು ನಿನಗೆ ದುಸ್ವಪ್ನ ಆಗಿ ಬರದಿರಲಿ
ಬರುವವರು ಒಗೆತನದ ಸಖರಾಗಿ ಬರಲಿ.
ಮಲಗು ನಿದ್ರಿಸು ಕಂದ ಚೆಲು ನಗುವ ಶುಭವೆ
ಇಂಥ ಕಾವಳದಲ್ಲು ಹೊಳೆವ ಸಿರಿ ಮುಖವೆ
ಬೇರು ಎಲ್ಲೇ ಇರಲಿ, ಒಳಗಿನ ಜ್ಯೋತಿ
ಆರದ ಹಾಗೆ ಇರಲಿ ಒಡಲಿನ ಧಾತು;
ಸಿರಿ ಮುಖದಲ್ಲಿ ಬಂದರು ನೆರಿಗೆ, ಪಟು
ಇರಲಿ ಕಣ್ಣು ಕಿವಿ ತಲೆ ಮಾತು.
ಮಲಗು ನಿದ್ರಿಸು ಕಂದ ಪುಟ್ಟಾಣಿ ಜೋ ಜೋ
ಯೋಗ ನಿದ್ರೆಯ ಆದಿ ಶಿಶು ಮುದ್ದು ಜೋ ಜೋ
32
ಮಲಗಿದ ಮಕ್ಕಳ ಮುಗಿಸಿದೆ ಈಗ
ಭ್ರೂಣದ ಸುತ್ತ ಹಬ್ಬಿದೆ ಅಸ್ತ್ರ.
ದೇವರು ಬರುವನೆ ಕಾಪಾಡುವನೆ
ಭ್ರೂಣವ ಉಳಿಸೀ ಮೈ ಬೆಳೆಸುವನೆ?
ಇದ್ದರೆ ತಾಖತ್ತಿದ್ದರೆ ಬರಲಿ.
ಅಡಗಲು ಗುಹೆಯೋ ಆಳದ ಬಂಕರೊ
ಇದ್ದರು ಅಣುವಿನ ಉರಿಯಲಿ ಸುಡುವೆನು
ಗರ್ಭದ ಕತ್ತಲ ತಾಯಿಯ ಲೋಕವ.
ಅಂತೂ ಹೇಗೋ ಹುಟ್ಟಿದರೂ ಸಹ
ಕೈಯ್ಯೋ ಕಾಲೋ ಕಣ್ಣೋ ತಲೆಯೋ
ತಿರುಚಿಯೊ ಉರುಟಿಯೊ ಮೆಳ್ಳೋ ಕುಳ್ಳೋ--
ನೆಲವೂ ಕೂಡಾ ಸತ್ತದ್ದೇ ಪರಿ
ಉರುಳುತ ಅಸವಳಿಯುತ ನೀರಡಿಸುತ
ಕಟ್ಟದೆ ಏನೂ ಹುಟ್ಟಿಸಲಾಗದೆ
ಮಾಡುವರೇನೂ? ಮಕ್ಕಳ ಮುಗಿಸಿದೆ;
ಭ್ರೂಣದ ಸುತ್ತ ಈಗಿದೆ ಅಸ್ತ್ರ.
(ಮೇಲಿನವು ನನ್ನ "ಇಂದ್ರಪ್ರಸ್ಥ" (2) ಎಂಬ 32 ಭಾಗಗಳಿರುವ ದೀರ್ಘ ಕವನದ ಕೆಲವು ಭಾಗಗಳು. ಇಡೀ ಕವನ ನನ್ನ ಕವನ ಸಂಗ್ರಹ ಮಾತಾಡುವ ಮರ (2003)ದಲ್ಲಿ ಲಭ್ಯವಿದೆ.
*************
ಬೋಧಿ ಟ್ರಸ್ಟ್ ಪುಸ್ತಕಗಳು ಬೆಂಗಳೂರಿನಲ್ಲಿ ನ್ಯೂ ಪ್ರೀಮಿಯರ್ ಬುಕ್ ಶಾಪ್, ಬನಶಂಕರಿ ಎರಡನೇ ಹಂತ, ಬೆಂಗಳೂರು
ಹಾಗೂ ಅತ್ರಿ ಬುಕ್ ಸೆಂಟರ್, ಮಂಗಳೂರು--ಇಲ್ಲಿ ಸಿಕ್ಕುತ್ತವೆ. ಅಥವಾ, Bodhi Trust, SB Account no.1600101008058, Canara Bank, Yenmur 574328, Sullia Taluk, Karnataka, IFSC: CNRB0001600-- ಇಲ್ಲಿಗೆ ನಿಮಗೆ ಬೇಕಾದ ಪುಸ್ತಕಗಳ ಮೊತ್ತ ಜಮೆ ಮಾಡಿ bodhitrustk@gmail.comಗೆ ವಿಳಾಸ ತಿಳಿಸಿದರೆ ಪುಸ್ತಕ ಕಳಿಸುತ್ತೇವೆ. ಡೊನೇಶನ್ನುಗಳಿಗೆ ಸ್ವಾಗತ. ಡೊನೇಷನ್ನನ್ನೂ ಮೇಲಿನ ಅಕೌಂಟಿಗೆ ಜಮೆ ಮಾಡಿ ಇಮೇಲ್ ಮೂಲಕ ತಿಳಿಸಿರಿ.
ಮಾರಾಟಕ್ಕೆ ಲಭ್ಯವಿರುವ ನಮ್ಮ ಪುಸ್ತಕಗಳು:
1. ಮಾತಾಡುವ ಮರ. ಸಮಗ್ರ ಕಾವ್ಯ, 1964-2003. ರೂ100.00
2. ಹ್ಯಾಮ್ಲೆಟ್. ಅನುವಾದ. ರೂ50.00
3. ಮುಚ್ಚು ಮತ್ತು ಇತರ ಲೇಖನಗಳು. ರೂ50.00
4. ಸಮಗ್ರ ನಾಟಕಗಳು, ಸಂಪುಟ 2. ರೂ60.00
5. ಸಮಗ್ರ ನಾಟಕಗಳು, ಸಂಪುಟ 3. ರೂ75.00
Thursday, December 30, 2010
ಉದ್ಘಾಟನೆಯ ಇನ್ನಷ್ಟು ಫೊಟೋಗಳು
ಇವು ಬೋಧಿ ಟ್ರಸ್ಟ್ ಉದ್ಘಾಟನೆಯ ದಿನ ಉಡುವೆಕೋಡಿ ಮನೆಯಲ್ಲಿ ತೆಗೆದ ಇನ್ನಷ್ಟು ಫೊಟೋಗಳು.
ಫೊಟೋದಲ್ಲಿರುವುದು ಬಿ. ವಿ. ಕಾರಂತರು, ನಾನು ಮತ್ತು ಜಯರಾಮ ಪಾಟೀಲ. ಇವರು ಬಾಬುಕೋಡಿ ಪ್ರತಿಷ್ಠಾನದ ಸದಸ್ಯರು.
ಫೊಟೋದಲ್ಲಿರುವುದು ಬಿ. ವಿ. ಕಾರಂತರು, ನಾನು ಮತ್ತು ಜಯರಾಮ ಪಾಟೀಲ. ಇವರು ಬಾಬುಕೋಡಿ ಪ್ರತಿಷ್ಠಾನದ ಸದಸ್ಯರು.
Sunday, December 26, 2010
ಬೋಧಿ ಟ್ರಸ್ಟ್: ಹತ್ತು ವರ್ಷ
ಬೋಧಿ ಟ್ರಸ್ಟ್ ಪ್ರಾರಂಭವಾಗಿ ಹತ್ತು ವರ್ಷವಾಯಿತು. ಈ ಚಿತ್ರಗಳು ಆಗಸ್ಟ್ 6, 2000ರಂದು ಬಿ. ವಿ. ಕಾರಂತರು ಕಲ್ಮಡ್ಕದಲ್ಲಿ ಮಾಡಿದ ಉದ್ಘಾಟನಾ ಭಾಷಣದವುಗಳು. ಮೊದಲನೆಯ ಚಿತ್ರ ನಾನು ಮಾಡುತ್ತಿರುವ ಸ್ವಾಗತ ಭಾಷಣ ಮತ್ತು ಕೂತಿರುವ ಬಿ. ವಿ. ಕಾರಂತರು. ಅವರಿಗೆ ಆಗ ತಾನೇ ಕ್ಯಾನ್ಸರ್ ಇದೆಯೆಂದು ಪತ್ತೆಯಾಗಿತ್ತು. ಅದನ್ನು ತೋರಿಸಿಕೊಡದೆ ಮಾತಾಡಿದರು. ನಾಲ್ಕನೆಯ ಚಿತ್ರದಲ್ಲಿ ಕೆಂಪು ಅಂಗಿ ಹಾಕಿ ಕ್ಯಾಮೆರಾ ಹಿಡಿದು ಕೂತವರು ಉಡುವೆಕೋಡಿ ರಾಧಾಕೃಷ್ಣ. ಅಲ್ಲೇ ಸ್ವಲ್ಪ ಹಿಂಬದಿಯಲ್ಲಿರುವವರು--ಎಡಗೈಯ್ಯನ್ನು ಬಾಯಿಯ ಮೇಲೆ ಇಟ್ಟುಕೊಂಡು ಕೂತ ಹುಡುಗ--ಅವರ ಅಣ್ಣ--ಈಗ ದಿವಂಗತ-- ಉಡುವೆಕೋಡಿ ಶಿವಶಂಕರ. ಒಂದು ಒಳ್ಳೆಯ ಪದ್ಯ ಬರೆದಿದ್ದ. ಆಗ ನನಗಿನ್ನೂ ಮನೆ ಆಗಿರಲಿಲ್ಲ. ಹೀಗಾಗಿ ನನ್ನ ಹತ್ತಿರದ ಬಂಧುವಾದ ಶಿವಶಂಕರನ ಮನೆಯಲ್ಲಿ ಬಿ. ವಿ. ಕಾರಂತರಿಗೆ ವ್ಯವಸ್ಥೆ ಮಾಡಲಾಗಿತ್ತು. ಅವತ್ತು ಕಾರಂತರು ಬಯಸಿ ತಂಬಳಿ ಮಾಡಿಸಿಕೊಂಡಿದ್ದರು. ಎರಡನೆಯ ಸಾಲಿನಲ್ಲಿ ಎಡಬದಿಗೆ ಮೊದಲನೆಯವರಾಗಿ ಮುಖಕ್ಕೆ ಕೈ ಹಿಡಿದು ಕೂತವರು ಟಿ. ಜಿ. ಮುಡೂರರು. ಅವರ ಹಿಂದೆ ಇರುವವರು ಕೆರೆಕ್ಕೋಡಿ ಗಣಪತಿ ಭಟ್ಟರು. ಮೂರನೆಯ ಚಿತ್ರದಲ್ಲಿ ಕಾರಂತರಿಗೆ ನೆನಪಿನ ಕಾಣಿಕೆ ಕೊಡುತ್ತಿರುವವರೂ ಇವರೇ. ಇವರೇ ಸುಮಾರು ಅರುವತ್ತು ವರ್ಷಗಳ ಹಿಂದೆ ಕಲ್ಮಡ್ಕದಲ್ಲಿ ಸಾಹಿತ್ಯಿಕ ಸಾಂಸ್ಕೃತಿಕ ಚಟುವಟಿಕೆ ಪ್ರಾರಂಭಿಸಿ ಇಲ್ಲಿ ಒಂದು ಬದಲಾವಣೆ ತಂದವರು. ಯರ್ಮುಂಜ ರಾಮಚಂದ್ರರ ಪ್ರಥಮ ಕಥಾಸಂಗ್ರಹ ಚಿಕಿತ್ಸೆಯ ಹುಚ್ಚು ಮತ್ತು ಇತರ ಕಥೆಗಳು (1955) ಪ್ರಕಟಿಸಿದವರೂ ಇವರೇ. ಗಣಪತಿ ಭಟ್ಟರು ಈಗ ದಿವಂಗತರು. ನನಗೆ ಹೈಸ್ಕೂಲಿನಲ್ಲಿ ಅಧ್ಯಾಪಕರೂ ಆಗಿದ್ದ ಮುಡೂರರು ಈಗ ಪಂಜದಲ್ಲಿ ನೆಲೆಸಿದ್ದಾರೆ. ಕವಿ. ಒಳ್ಳೆಯ ಕವಿ. ಕೆಲವು ಒಳ್ಳೆಯ ಕತೆ ಬರೆದಿದ್ದಾರೆ. ಹೊನ್ನಮ್ಮನ ಕೆರೆ ಎಂಬ ಹೆಸರಿನ ಒಂದು ಒಳ್ಳೆಯ ಜಾನಪದ ಕವನವನ್ನು ಮಡಿಕೇರಿಯಲ್ಲಿ ಜಾನಪದ ಕಾವ್ಯ ಸಂಗ್ರಹ ವ್ಯಾಪಕವಾಗಿ ಪ್ರಾರಂಭವಾಗುವುದಕ್ಕೆ ಮೊದಲೇ 1950ರ ದಶಕದಲ್ಲೇ ಸಂಗ್ರಹಿಸಿದ್ದಾರೆ. ಇವರ ಜೊತೆಯ ಇನ್ನೊಬ್ಬರಾದ ಕೆ. ರಾಮಚಂದ್ರ ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿ.ಎ. ಆನರ್ಸ್ ಓದುತ್ತಿದ್ದಾಗ ತಮ್ಮ 24-25ನೆಯ ವಯಸ್ಸಿನಲ್ಲಿ ಕ್ಷಯರೋಗದಿಂದ ತೀರಿಕೊಂಡರು. ಇವರ ಕವನ "ಸುಪ್ತಶಕ್ತಿ"ಯನ್ನು ಕಲ್ಮಡ್ಕದ ಶಾಲಾ ವಿದ್ಯಾರ್ಥಿಗಳ ಮೂಲಕ ಸುಮಾರು ಎಂಟು ವರ್ಷಗಳ ಹಿಂದೆ ಒಂದು ಸಮಾರಂಭದಲ್ಲಿ ಹಾಡಿ ಸಭಿಕರೆದುರು ಸಾದರ ಪಡಿಸಲಾಯಿತು. ಅವತ್ತು ಪುತ್ತೂರಿನ ಬೋಳಂತಕೋಡಿ ಈಶ್ವರ ಭಟ್ಟರ ಕರ್ನಾಟಕ ಸಂಘ ಪುನರ್ಮುದ್ರಿಸಿದ ಅವರ ಕವನ ಸಂಗ್ರಹದ ಬಿಡುಗಡೆ ಇತ್ತು. ಆ ಪುಸ್ತಕದ ಹೆಸರು: ಬಿದ್ದದ್ದು ಗರಿಯಲ್ಲ, ಹಕ್ಕಿಯೇ.
ಹತ್ತು ವರ್ಷವಾದ್ದನ್ನು ಸಂಭ್ರಮಿಸಿಕೊಳ್ಳಲು ಈಗಾಗಲೇ ಭಾರತೀಯ ಕಾವ್ಯದ ಆರ್ಕೈವ್ ಪ್ರಾರಂಭಿಸಿದ್ದೇವೆ. ಇದರ ವಿಳಾಸ: http://kavyodyoga.blogspot.com ನೋಡಿ, ಓದಿ. ಒಳ್ಳೆಯ ಕವಿತೆಗಳ ಒಳ್ಳೆಯ ಅನುವಾದಗಳಿದ್ದರೆ ತಿಳಿಸಿ, ಕಳಿಸಿ.
ಇದರ ಜೊತೆಗೆ ಕಾವ್ಯೋತ್ಸವ ನಡೆಸಬೇಕೆಂದಿದ್ದೇವೆ. ಮೊದಲ ಕಾವ್ಯೋತ್ಸವ ಮಾರ್ಚ್ 20ರಂದು ಬೆಂಗಳೂರಿನಲ್ಲಿ ನಡೆಯಲಿದೆ.

Friday, December 24, 2010
ಇಂದ್ರಪ್ರಸ್ಥ-1
ಊರು ಕಟ್ಟುವ ಮೊದಲು ಧ್ವಂಸ ಆಗಲೇ ಬೇಕಾದದ್ದು ಈ ಕಾಡು
ಎಂದು ಯೋಚಿಸಿದ ಕೃಷ್ಣ ಮತ್ತು ಪಾರ್ಥ
ಒಣಕು ಬಳ್ಳಿಗೆ ತರಗೆಲೆಗೆ ಕಾಷ್ಠಕ್ಕೆ
ಕಿಚ್ಚಿಟ್ಟರು. ಬೆಳಕು ಹಬ್ಬಲು ಕಾಡ ಕತ್ತಲೆಯ ಆಳಕ್ಕೆ
ಪ್ರಾಣಿಗಳು ಹಕ್ಕಿಗಳು
ಧಾವಿಸಲು ತೊಡಗಿದವು--ಚೀರುತ್ತ ಕೂಗುತ್ತ.
ಕಾಡ ಆಚೀಚೆ ಕೃಷ್ಣ-ಅರ್ಜುನ ನಿಂತು
ಪ್ರಾಣಿಗಳು ತಪ್ಪಿಸಲು ಹವಣುವುದ ಕಂಡೊಡನೆ
ಬೆನ್ನಟ್ಟಿ ಹಿಡಿಯುವರು, ಮರಳಿ ಉರಿಗೆಸೆಯುವರು.
ಕೊಳ ಹಳ್ಳ ನೀರೊರತೆ ಇತ್ಯಾದಿ ಜಲತಾಣ
ಕುತ ಕುತ ಕುದಿದು ತೇಲಿದವು
ಆಮೆ ನೀರೊಳ್ಳೆ ಮೀನು ಮೊಸಳೆಗಳು.
ಪ್ರತಿ ಜೀವ ಈಗ ಉರಿಯುವ ದೊಂದಿ.
ಸುಟ್ಟ ರೆಕ್ಕೆ ಕಿತ್ತ ಕಣ್ಣು ತುಂಡಾದ ಬಾಲ ತಲೆಗಳ
ವಿಧ ಬಗೆಯ ಪಕ್ಷಿ ಪ್ರಾಣಿ
ಪ್ರಾಣ ಸಂಕಟದಲ್ಲಿ ಮೇಲಕ್ಕೆ ಚಿಮ್ಮಿದರೆ
ಪಾರ್ಥ ಬಾಣಗಳಿಂದ ಎರಡಾಗಿ ತುಂಡರಿಸಿ
ಗಹ ಗಹ ನಕ್ಕು ಮತ್ತೆ ಆಹುತಿ ಕೊಡುವ.
ದೇವತೆಗಳು ಇಂದ್ರನಿಗೆ ಮೊರೆಯಿಟ್ಟರು.
ಆತ ನಿರಂತರ ಮಳೆ ಬೀಳಿಸಿದ
ಖಾಂಡವದ ಕಾಡನ್ನು, ಜೀವಗಳನ್ನು
ಉಳಿಸಿಯೇ ತೀರುವೆನೆಂದು.
ಆವಿಯಾಯಿತು
ನೆಲಕ್ಕೆ ಬೀಳುವ ಮೊದಲೇ.
ಇಂದ್ರ ಮಳೆಧಾರೆ ಹೆಚ್ಚಿಸಿದ.
ಹೀಗೆ ಸುರಿದರೆ ಪ್ರಳಯ
ಈತ, ಈ ಪುರವೈರಿ,
ಹೊಸನಗರ ಕಟ್ಟುವುದಕ್ಕೆ ಎಂದು ಸಹ ಬಿಡ ಎಂದು
ಕಾಡಿನ ಮೇಲೆ ಬಾಣಗಳ ಮಾಡು ನಿರ್ಮಿಸಿ ಪಾರ್ಥ
ಮಳೆಯ ಹನಿ ಚಿತೆ ಮೇಲೆ
ಬೀಳದ ರೀತಿ ತಡೆ ತಂದ. ಪರಿಣಾಮವಾಗಿ
ಕಾಡು ಬೆಂಕಿಗೆ ಸುಟ್ಟು
ಹೊಸ ಜನದ ಹೊಸ ಊರು ಕಟ್ಟಿ ಮುಗಿವುದು ಎಂದು
ಕೃಷ್ಣ ಯುಧಿಷ್ಠಿರ ಪಾರ್ಥ ಮೊದಲಾದ ನಾಗರಿಕ
ಜನಕ್ಕೀಗ ಅನ್ನಿಸಿತು.
ನಾಡು ಕಟ್ಟುವುದಕ್ಕೆ ಇದ್ದ ಅಡಚಣೆ ಅಷ್ಟು
ಬೇಗ ಪ್ರಾಣಿಗಳಿಂದ ಹಿಂಗುವಂತಿರಲಿಲ್ಲ.
ರೆಕ್ಕೆಗಳಿಂದ ಕೊಕ್ಕುಗಳಿಂದ ಕೈಯಿಂದ ಪಂಜಗಳಿಂದ
ಮುಗಿಸಿಯೇ ತೀರುವೆವೆಂದು
ಮೋಡಗಳಂತೆ ಆವರಿಸಿ ಹಾರಿ ಬಂದವು ಗರುಡ
ಮೊದಲಾದ ಹಕ್ಕಿಗಳು;
ಪಾತಾಳ ಏರಿ ಬಂದವು ಹಾವು, ಬಾಯಲ್ಲಿ ವಿಷ ಸುರಿಸಿ.
ಒಬ್ಬ ಯಃಕಶ್ಚಿತ್ ಮನುಷ್ಯ ತಾವು ವಾಸಿಸುವ ನಗರಕ್ಕೆ ಸರಿಸಮವಾದ
ನಗರ ಒಂದನ್ನು ಇಳೆ ಮೇಲೆ ಕಟ್ಟ ಹೊರಟದ್ದು ಕಂಡು
ಕೃಷ್ಣನಂಥಾ ದೇವರೂ ಅವನ ಜೊತೆಗೇ ಸೇರಿದ್ದಕ್ಕೆ ರೇಗಿ
ಯಕ್ಷ ರಾಕ್ಷಸ ಗಂಧರ್ವ ದೇವ ಕಿನ್ನರರು
ಒಟ್ಟಿಗೇ ಎರಗಿ ಬಂದರು--ಬಂಡೆಗಳ ಮಳೆಗರೆದು
ಇಂದ್ರ ಮತ್ತಷ್ಟು ಮಳೆ ಹೊಯ್ದು.
ಪಾರ್ಥ ಜಗ್ಗುವಂತಿರಲಿಲ್ಲ.
ಕೊನೆಯಲ್ಲಿ
ಈ ಮಗ ಏನಾದರೂ ಮಾಡಿಕೊಂಡು ಹಾಳಾಗಲಿ,
ನಗರ ಕಟ್ಟಿದ ಮೇಲೆ ಸೇಡು ತೀರಿಸೋಣ; ಅದಕ್ಕಿಂತ ಮೊದಲು
ಇದೊಂದು ನೋಡೋಣ, ಕೊನೆ ಬಾರಿ, ಎಂದು
ದೊಡ್ಡದೊಂದು ಪರ್ವತವನ್ನು
ಖಾಂಡವದ ಕಡೆ ಎಸೆದು ಆ ಇಂದ್ರ, ಪಾರ್ಥನ ಅಪ್ಪ,
ಮುಖ ತಿರುಗಿಸಿ ಹೊರಟು ಹೋದ.
ಅವನೊಡನೆ ಇತರರೂ ಹಿಂದಿರುಗಿದರು.
ತನ್ನೆಡೆಗೆ ಬರುತ್ತಿದ್ದ ಪರ್ವತವನ್ನು ಪಾರ್ಥ
ಛಿದ್ರಿಸಿದ ತುಂಡು ತುಂಡಾಗಿ. ಖಾಂಡವದ ಮೇಲೆ ಬಿದ್ದವು
ಆ ತುಂಡು ತುಂಡುಗಳು. ಇನ್ನಷ್ಟು
ಪ್ರಾಣಿ ಸತ್ತವು; ಗಿಡ ಮರ ಉರುಳಿದವು;
ಸಮತಟ್ಟು ಬಂದವು
ತೆವರು ತಗ್ಗುಗಳು.
ದೇವರೇ ಕೈ ಬಿಟ್ಟು ಹಿಂದಿರುಗಿ ಹೋಗಿರುವಾಗ
ಜೀವ ಉಳಿಯುವ ಆಸೆ ಯಾರಿಗೂ ಇರಲಿಲ್ಲ.
ಸಿಂಹ ಘರ್ಜಿಸಿ ಆನೆ ಘೀಳಿಟ್ಟು ನರಿ ತೋಳ ಊಳಿಟ್ಟು
ಹಕ್ಕಿಗಳು ಕಿರುಚಿ ಹುಳಗಳು ಚಿರುಟಿ
ಬೆಂಕಿ ಹಬ್ಬುತ್ತಿತ್ತು--ಅಗಲಕ್ಕೆ ಉದ್ದಕ್ಕೆ.
ತಪ್ಪಿಸಿಕೊಂಡು ಹೋದ ತಕ್ಷಕ ಎಂಬ ಹಾವೊಂದು ಬಿಟ್ಟು
ಉಳಿದ ಪ್ರತಿಯೊಂದು ಕಬಳಿಸಿ ಅಗ್ನಿ
ಸುಟ್ಟ ಮರ ಹೆಣಗಳ ರಾಶಿ ಬೆಂದ ಇಳೆ
ಕೊಟ್ಟು ವಿರಮಿಸಿತು. ಈಗ ಪಾರ್ಥ
ಮಳೆ ಕೆಳಗೆ ಇಳಿಯದ ಹಾಗೆ ತಡೆದಿದ್ದ ತಡೆ ತೆಗೆದ.
ಬೂದಿ ಇದ್ದಿಲ ರಾಶಿ ಮರಗಳ ತುಂಡು ರೆಕ್ಕೆಗಳು ಅಸ್ಥಿಗಳು
ತೊಳೆದು ಹೋದವು. ಹಳ್ಳ ಕೊಳ್ಳಗಳು
ಮರಳಿ ತುಂಬಿದವು. ಆ ಮೇಲೆ
ರಸ್ತೆ ಮನೆ ಶಾಲೆ ಕೋಟೆಗಳ ಕಾಲುವೆಯ ಕಂದಕವ
ಬುರುಜುಗಳ ದ್ವಾರಗಳ ಕಛೇರಿಗಳ ಲಾಯಗಳ
ಕಟ್ಟಿದರು. ಅಲ್ಲಿ ವಾಸಿಸಲು
ಕವಿಗಳು ನರ್ತಕರು ವರ್ತಕರು ಪಂಡಿತರು
ಬಂದು ನೆಲೆಸಿದರು. ಉದ್ಯಾನವನಕ್ಕೆ
ಮಾವು ನೇರಿಲೆ ಕದಂಬ ಮಲ್ಲಿಗೆ ಮೊದಲಾದ ಫಲ ಪುಷ್ಪ
ನವಿಲು ಗಿಳಿ ಶಾರ್ಙಕವೇ ಮೊದಲಾದ ಹಕ್ಕಿಗಳು
ಬಂದು ಸೇರಿದವು; ಹುಲಿ ಸಿಂಹ ಚಿರತೆ ಚಿಂಪಾಂಜಿ ನರಿ ಮುಸುವ
ಏಡಿಗಳು ಹಾವುಗಳು ಮೀನುಗಳು ಉಡ ಕೋತಿ
ಮೃಗಶಾಲೆಯಲ್ಲಿ; ಆನೆಗಳು ಮಾವುತನ ಕುದುರೆಗಳು ರಾವುತನ
ಅಂಕುಶಕ್ಕೊಳಪಟ್ಟು; ಕಾಡಿನ ಪ್ರಾಣಿ
ಹೀಗೆ, ನಾಡ ಸರಹದ್ದಲ್ಲಿ
ಬಂದು ಉಳಿದವು ಈಗ.
ನಾಡು ಈ ರೀತಿ ಬೆಳೆದ ಮೇಲೊಂದು ಹುಣ್ಣಿಮೆ ರಾತ್ರಿ
ಯುಧಿಷ್ಠಿರನೇ ಮೊದಲಾದ ಪಾಂಡವರು ಕೃಷ್ಣನೊಡಗೂಡಿ
ನೆಟ್ಟು ಬೆಳೆಸಿದ ಕಾಡಿನ ನಡುವೆ ಕಟ್ಟಿ ನಿರ್ಮಿಸಿದ ಹೊಳೆ ದಂಡೆ
ಮೇಲೆ ಸೇರಿತು ಗೋಷ್ಠಿ.
ಮದಿರೆ ಸಂಗೀತ ಸಖೀಜನ ಸೇರಿ
ದ್ರೌಪದಿ ಸುಭದ್ರೆಯರು ನರ್ತಿಸಲು ತೊಡಗಿದರು.
ಕೆಲವರು ಈಜಿ ಕೆಲವರು ಹಾಡಿ ಸಂಕಥಿಸಿ ಕೆಲರು
ಅತ್ತು ಕಣ್ಣೊರೆಸಿದರು, ನಕ್ಕು ಮಾತಾಡಿದರು ವಿನೋದಕ್ಕೆ ತೊಡಗಿದರು.
ಕೆಲರು ಸುಖದೊಂದು ಮಾತನ್ನು ಅಪರಿಚಿತ ಕಿವಿಯಲ್ಲಿ ಉಸುರಿದರು.
ಬೆಳೆಸಿದ್ದ ಕಾಡಿನ ಹೂವು ಗಿಡ ಎಲೆ ತಳಿರು ಕೊಳ ನೀರು
ಚಂದ್ರನ ಬೆಳಕಿಂದ, ನಕ್ಷತ್ರಗಳ ಪ್ರತಿಬಿಂಬದಿಂದ
ಗುಟ್ಟುಗಳಿಂದ ನುಡಿಸುಯ್ಲಿನಿಂದ ಕಿಲಕಿಲದ ನಗುವಿಂದ
ಉಲ್ಲಾಸದಿಂದ ಆಯಾಸದಿಂದ ಮೈಮುರಿತದಿಂದ ಎದೆ ಬಡಿತದಿಂದ
ಕೊಳಲಿಂದ ವೀಣೆಗಳಿಂದ ಗೆಜ್ಜೆ ಕಿಲಕಿಲದಿಂದ ಮೃದಂಗಗಳಿಂದ
ಪ್ರತಿಧ್ವನಿಸತೊಡಗಿತ್ತು--ಆಕಾಶದಲ್ಲಿರುವ
ಇಂದ್ರನೇ ಮೊದಲಾದ
ದೇವರಿಗೆ ಕೇಳುವ ಹಾಗೆ.
*****
ಟಿಪ್ಪಣಿ: 1. ಮಹಾಭಾರತದಲ್ಲಿ ಪಾಂಡವರು ಇಂದ್ರಪ್ರಸ್ಥ ನಗರ ಕಟ್ಟಿ ವಾಸಿಸಲು ಸುರು ಮಾಡಿದ ಮೇಲೆ ಅಗ್ನಿಯ ಹಸಿವು ತಣಿಸಲು ಖಾಂಡವವನ ಸುಟ್ಟರು ಎಂಬ ಕತೆ ಬರುತ್ತದೆ. ನನಗೆ ಬೇಕಾದ್ದನ್ನು ಹೇಳುವುದಕ್ಕಾಗಿ ಕಾಡು ಸುಟ್ಟ ಮೇಲೆ ನಗರ ಕಟ್ಟಿದರು ಎಂದು ಈ ಕತೆಯನ್ನು ಇಲ್ಲಿ ಬದಲಾಯಿಸಿಕೊಂಡಿದ್ದೇನೆ. ಈ ಪದ್ಯ ಮೊದಲು ಮಾತಾಡುವ ಮರದಲ್ಲಿ ಪ್ರಕಟವಾಗಿದೆ.
2. ಬೋಧಿ ಟ್ರಸ್ಟ್ KAVYODYOGA ಎಂಬ ಹೊಸ ಬ್ಲಾಗ್ ಸುರು ಮಾಡಿದೆ. ಇದು ಭಾರತೀಯ ಕಾವ್ಯ ಖಜಾನೆ. ಈ ನಾಡಿನ ಯಾವುದೇ ಭಾಷೆಯ ಕಾವ್ಯದ ಇಂಗ್ಲಿಷ್ ಅನುವಾದಗಳನ್ನು ಈ ಸೈಟಿನಲ್ಲಿ ಪ್ರಕಟಣೆಗಾಗಿ ಕಳಿಸಬಹುದು. ವಿಳಾಸ: bodhitrustk@gmail.com KAVYODYOGAದ ವಿಳಾಸ: http://kavyodyoga.blogspot.com
3. Bodhi Trust accepts donations. Please send cheques and DDs to Bodhi Trust, Kalmadka 574212, Bellare, Karnataka. For details, please write to bodhitrustk@gmail.com
4. Bodhi Trust books in Kannada are available for sale.For details, please contact the above email address.
ಶಾಂತಿನಾಥ ದೇಸಾಯಿ ವಾಚಿಕೆ ನನ್ನ ಇತ್ತೀಚಿನ ಪುಸ್ತಕ. ಇದಕ್ಕೆ ನಾನು ಬರೆದ ದೀರ್ಘ ಪ್ರಸ್ತಾವನೆಯಿದೆ. ಅದರಲ್ಲಿ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ನನಗೆ ಮತ್ತು ದೇಸಾಯಿಯವರಿಗೆ ಆದ ಅನುಭವಗಳ ವಿವರವೂ ಇದೆ.

Sunday, December 19, 2010
ಹಾಡು
ಹೀಗೇ ತೆವಳುತ್ತ ಇರುವಾಗ ಪ್ರಭುವೇ
ಬಂದು ಕಾಡು ನನ್ನ
ಮುಟ್ಟಿ ನೋಡು.
ಮರಳುಗಾಡೇ ಅಲ್ಲ ಹುಗಿವ ಹುದುಲೇ ಅಲ್ಲ
ಫಲವತ್ತು ನೆಲವೇ
ಹೂಡಿ ನೋಡು.
ಬೆರೆ ಬೆರೆ ಶಬ್ದವ ಕವಿತೆಯ ಮಾಡುವ
ಮಾತಿನ ಪ್ರಾಣವೆ
ಬಂದು ಆಡು.
ಒಳಗಿನ ಕತ್ತಲ ಫಕ್ಕನೆ ಬೆಳಗುವ
ಬಾನಿನ ಬೆಳಕೇ
ಬಳಿ ಸಾರು.
ಎಂದೋ ಬರುವವ ಬಾರದೆ ಕೂತವ
ಎಲ್ಲಾದರು ತುಸು
ಚಹರೆ ತೋರು.
ದಾರಿಯ ಹುಡುಕುತ್ತ ತೆವಳುತ್ತ ಇರುವಾಗ
ಪ್ರಭುವೇ ಫಕ್ಕನೆ ಬಂದು ಕಾಡು ನನ್ನ
ಒಳ ಸೇರು.
(ಮಾತಾಡುವ ಮರ ಸಂಗ್ರಹದಲ್ಲಿ ಮೊದಲು ಪ್ರಕಟವಾಗಿರುವ ಕವನ)

Saturday, December 18, 2010
KEEP QUIET, OR
Didn`t I tell you
not to drive away
the fly
from the dirt?
You didn`t listen.
It flew from the dirt
and is now sitting
on the puss
flowing from the wound.
Don`t drive it away
from there: it may
fly and sit
on the rice
you are to eat.
Or, if you can aim right
clap your hands once and kill it stright
sit back and relax.
(Translated from original Kannada by me. Kannada original is published in Mataduva mara, my collected poems.)
**********
Bodhi Trust has now started a new blog. It is an archive for Indian poetry in English translations. Visit:
http://kavyodyoga.blogspot.com

Tuesday, December 14, 2010
POETRY: THE VERY FOUNDATION OF CIVILIZATION
Let me write about the new blog Bodhi Trust has started recently. Its address is:
http://kavyodyoga.blogspot.com
This blog is an archive for Indian poetry in English translations. Bodhi Trust wants to make it as comprehensive as possible by including as many good Indian poems in English translations as possible. We want to publish the poems already published in print-from, and the new ones. We also want to identify new good poems, have them translated into English, and publish them. For this, we need the help of our readers and fellow-poets.
These are the problems we face:
1. Getting copies of the poems already available in print-form is a difficult task. Many books are out of print; many are published by the small-publishers or authors themselves, and are not properly distributed. Readers can help us by emailing those poems to Bodhi Trust. We will also be grateful to writers if they email their poems to us.--both already published and the new ones.
2. If we have come across poems in printed versions, it is becoming difficult to obtain permission from the copyright holders. Quite often their addresses are not available, or, proverbially, Indian writers do not reply to the letters. We make every attempt to trace the copyright holders and get their permission. If we fail in spite of our best efforts, we will act depending on the individual cases. For example, in spite of all the efforts, we have failed to locate the copyright holder of some of the English translations of Muktibodh`s poetry. Bodhi Trust sincerely feels it is better to publish Muktibodh`s poems in its blog and make them available to poetry-lovers rather than leave out his great poetry altogether.
3. Readers can respond to these poems by sending comments, critics and theoreticians by discussing individual poems and poetry in general.
4. Poetry is the subtlest use of language. And, Bodhi Trust believes that the very foundation of human civilization is language--not engines, not houses, not clothes, not aeroplanes, not money--but the language which preserves memory and passes it on to another person or another generation or another culture.Therefore, poetry is one of the very important things of a civilization. Any attempt to make this develop and flourish has the support of Bodhi Trust.
*********
Bodhi Trust accepts donations. Money can be remitted to Bodhi Trust, SB Account no.1600101008058, Canara Bank, Yenmur 574328, Dakshina Kannada District, Karnataka, IFSC CNRB0001600.
Bodhi Trust publications can be bought by remitting the price of the books directly to the above account and informing us of your address. Email address of Bodhi trust is: bodhitrustk@gmail.com

These are some of our publications:
1.Hamlet: Kannada translation of Shakespeare`s Hamlet. Rs50.00
2. Muccu mattu itara lekhnagalu. Essays on Mahabharata, clowns in Yakshagana, Shivarama Karanth`s novels, colonization etc.Rs60.00
3. Mataduva mara: collected poems, 1964-2003.Rs100.00
4. Samagra natakagalu vol.2. Rs60.00
5. Samagra natakagalu vol.3 Rs75.00
All these are by me--that is, Ramachandra Deva.

Subscribe to:
Posts (Atom)

ಫ